ಮಂಗಳೂರು: ಕರ್ನಾಟಕ ವಿಧಾನ ಪರಿಷತ್ತಿಗೆ ತೆರವಾಗಿದ್ದ ಮೂರು ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕ್ಕನೂರು ಹಾಗೂ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಗೆ ಸಲ್ಲಿಸಿದ ನಾಮಪತ್ರ ವಾಪಸ್ ಪಡೆಯಲು ಜೂನ್ 23 ಕೊನೆಯ ದಿನವಾಗಿತ್ತು. ಕಣದಲ್ಲಿ ಮೂವರೇ ಇದ್ದ ಕಾರಣದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.