ಮಂಗಳೂರು: ಮಂಗಳೂರಿನ ಸಂಘ ನಿಕೇತನದಲ್ಲಿ ಸಂಘ ಪರಿವಾರದ ಸಮನ್ವಯ ಬೈಠಕ್ ಇಂದು ನಡೆಯಲಿದೆ.
ಬಿಜೆಪಿ ಸಂಘ ಪರಿವಾರ ಹಾಗೂ ಸಂಘಟನೆಗಳ ಸುಮಾರು ನೂರಕ್ಕೂ ಅಧಿಕ ಮಂದಿ ಬೈಠಕ್ ನಲ್ಲಿ ಪಾಲ್ಗೊಳ್ಳಲಿದ್ದು, ಬೈಠಕ್ ಬಾರಿ ಮಹತ್ವ ಪಡೆದುಕೊಳ್ಳಲಿದೆ.
ಬೈಠಕ್ ನಲ್ಲಿ ಪುತ್ತೂರು ಸೇರಿದಂತೆ ಜಿಲ್ಲೆಯ ಬಿಜೆಪಿಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಮಾತ್ರವಲ್ಲದೆ ಲೋಕಸಭಾ ಚುನಾವಣೆ ಹಿನ್ನೆಲೆ ಪಕ್ಷ ಕೈಗೊಳ್ಳಬೇಕಾದ ತೀರ್ಮಾನದ ಬಗ್ಗೆ ಚರ್ಚೆ ನಡೆಯಲಿದೆ. ಬೈಠಕ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗಿಯಾಗಲಿದ್ದು, ಮತ್ತೆ ನಾಲ್ಕನೇ ಬಾರಿಗೆ ನಳಿನ್ ಕುಮಾರ್ ಕಟೀಲ್ ಅವರಿಗೆ ಲೋಕಸಭಾ ಚುನಾವಣೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಇದಲ್ಲದೆ ಪುತ್ತೂರಿನ ಹಿಂದೂ ಸಂಘಟಕ ಅರುಣ್ ಕುಮಾರ್ ಪುತ್ತಿಲ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಲೋಕಸಭಾ ಟಿಕೆಟ್ ನೀಡುವ ಕುರಿತು ಇದೇ ವೇಳೆ ಮಾತುಕತೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.