10 ರಾಜ್ಯಸಭಾ ಸ್ಥಾನಗಳಿಗೆ ಜುಲೈ 24ರಂದು ಚುನಾವಣೆ

ಮಂಗಳೂರು: 10 ರಾಜ್ಯಸಭಾ ಸ್ಥಾನಗಳಿಗೆ ಜುಲೈ 24ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಪಶ್ಚಿಮ ಬಂಗಾಳದಿಂದ 6, ಗುಜರಾತಿನಿಂದ 3 ಮತ್ತು ಗೋವಾದಿಂದ 1 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಪ್ರಸ್ತುತ ಇರುವ ಸದಸ್ಯರ ಅವಧಿ ಮುಕ್ತಾಯವಾಗಿರುವುದರಿಂದ ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಗುಜರಾತ್ ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈ ಶಂಕರ್ ಸೇರಿ ಬಿಜೆಪಿಯ ಮೂವರ ಅವಧಿ ಆಗಸ್ಟ್ 18ರಂದು ಮುಕ್ತಾಯವಾಗುವುದರಿಂದ ಚುನಾವಣೆ ನಿಗದಿಯಾಗಿದೆ.

ಜುಲೈ ಆರರಂದು ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ಜುಲೈ 13 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಅಭ್ಯರ್ಥಿಗಳು ಜುಲೈ 17ರೊಳಗೆ ತಮ್ಮ ನಾಮಪತ್ರವನ್ನು ಹಿಂಪಡೆಯಬಹುದಾಗಿದೆ. ಜುಲೈ 24ರಂದು ಮತದಾನ ಮತ್ತು ಮತ ಎಣಿಕೆ ನಡೆಯಲಿದೆ.

LEAVE A REPLY

Please enter your comment!
Please enter your name here