ಮಂಗಳೂರು: ವೈಯಕ್ತಿಕ ಟ್ವಿಟರ್ ಖಾತೆಗಳನ್ನು ನಿಷೇಧಿಸಲು ಕೇಂದ್ರದ ಆದೇಶ ವಿಚಾರವಾಗಿ ತನಿಖೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಟ್ವಿಟರ್ ಕಂಪನಿಗೆ 50 ಲಕ್ಷ ರೂಪಾಯಿ ದಂಡ ವಿಧಿಸಿದೆ.
ವ್ಯಕ್ತಿಗತ ಟ್ವಿಟರ್ ಖಾತೆಗಳನ್ನು ನಿಷೇಧಿಸುವ ವಿಚಾರವಾಗಿ ಕೇಂದ್ರದ ನಿರ್ಬಂಧ ಪ್ರಶ್ನಿಸಿ ಟ್ವಿಟರ್ ಅರ್ಜಿ ಸಲ್ಲಿಸಿತ್ತು. ಆದರೆ ಕೋರ್ಟ್ ಅರ್ಜಿ ವಜಾ ಗೊಳಿಸಿದೆ. 50 ಲಕ್ಷ ರೂಪಾಯಿ ದಂಡ ಪಾವತಿಸಲು 45 ದಿನಗಳ ಕಾಲಾವಕಾಶ ನೀಡಲಾಗಿದೆ. ಪಾವತಿ ತಡವಾದರೆ ಪ್ರತಿದಿನ 5 ಸಾವಿರ ರೂಪಾಯಿ ದಂಡ ವಿಧಿಸುವುದಾಗಿ ನ್ಯಾಯಾಲಯ ಎಚ್ಚರಿಸಿದೆ.
ಕೇಂದ್ರ ಸರ್ಕಾರ ಆಕ್ಷೇಪಾರ ಪೋಸ್ಟ್ ಅಳಿಸುವಂತೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಟ್ವಿಟರ್ ಹೈಕೋರ್ಟ್ ಮೊರೆ ಹೋಗಿತ್ತು. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಎಂದು ವಾದಿಸಿತ್ತು. ಟ್ವಿಟರ್ ವಾದವನ್ನು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ನೇತ್ರತ್ವದ ಏಕ ಸದಸ್ಯ ಪೀಠ ತಳ್ಳಿ ಹಾಕಿದೆ. ಸೆಕ್ಷನ್ 69 ಎ ಅಡಿ ಈ ರೀತಿ ನಿರ್ದೇಶನ ನೀಡುವ ಅಧಿಕಾರ ಸರಕಾರಕ್ಕಿದೆ. ಟ್ವೀಟ್, ರಾಷ್ಟ್ರೀಯ ಭದ್ರತೆ, ಸಾರ್ವಭೌಮತ್ವ ಮತ್ತು ಸುವ್ಯವಸ್ಥೆಗೆ ವಿರುದ್ಧವಾಗಿದ್ದರೆ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.