ರಾಷ್ಟ್ರಪತಿ ಮುರ್ಮು ಇಂದು ರಾಜ್ಯಕ್ಕೆ ಭೇಟಿ

ಮಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಸತ್ಯ ಸಾಯಿ ವಿವಿ ಯ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಇಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರಪತಿಗಳು, ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಮುದ್ದೇನಹಳ್ಳಿ ಗ್ರಾಮದ ಸತ್ಯಸಾಯಿ ಗ್ರಾಮಕ್ಕೆ ಆಗಮಿಸಲಿದ್ದಾರೆ. ರಾಷ್ಟ್ರಪತಿ ಭೇಟಿ ಹಿನ್ನೆಲೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ ಏರ್ಪಡಿಸಲಾಗಿದೆ. ಅಲ್ಲದೆ ಸಂಜೆ 6 ಗಂಟೆ ವರೆಗೆ ನಂದಿ ಗಿರಿಧಾಮ ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here