ಮಂಗಳೂರು: ಕಾಸರಗೋಡು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ ಶಾಲೆಗಳಿಗೆ ಜುಲೈ 5 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ.
ರಜೆ ಅಂಗನವಾಡಿ ಹಾಗೂ ಮದ್ರಸಗಳಿಗೆ ಅನ್ವಯವಾಗಲಿದೆ. ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ. ನಾಳೆಯೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.