ಮಡಿಕೇರಿಯ ಕರಿಕೆಯಲ್ಲಿ ಇಲಿ ಜ್ವರಕ್ಕೆ ಯುವಕ ಬಲಿ

ಮಂಗಳೂರು: ಇಲಿ ಜ್ವರಕ್ಕೆ ಯುವಕನೋರ್ವ ಬಲಿಯಾದ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಮೀಪದ ಚೆಂಬೇರಿ ಆನೆಪಾರೆಯ ಯುವಕ ಲಿಬೀನ್ ಇಲಿ ಜ್ವರಕ್ಕೆ ಬಲಿಯಾಗಿದ್ದಾನೆ. ಆನೆಪಾರೆಯ ನಿವಾಸಿ ಕೂಲಿ ಕಾರ್ಮಿಕ ಬಾಲನ್ ಎಂಬವರ ಪುತ್ರ ಲಿಬೀನ್ ಜ್ವರ ಪೀಡಿತನಾಗಿ ಕೇರಳದ ಪೆರಿಯಾರಂ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಜಾಂಡಿಸ್ ಕಾಯಿಲೆ ಇದೆ ಎಂದು ವೈದ್ಯರು ತಿಳಿಸಿದ್ದರು. ನಂತರ ಇದರೊಂದಿಗೆ ಇಲಿ ಜ್ವರ ಕೂಡ ಬಾಧಿಸಿದ್ದು, ಚಿಕಿತ್ಸೆ ಫಲಿಸದೆ ಲಿಬೀನ್ ಮೃತಪಟ್ಟಿದ್ದಾನೆ. ಇಲಿ ಜ್ವರದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸದ್ಯ ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.

LEAVE A REPLY

Please enter your comment!
Please enter your name here