ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಮನೆಸಂಪರ್ಕದ ಮುರಿದಾಟುವ ಸಂದರ್ಭ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮಳೆ ನೀರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿಯನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ (52) ಎಂದು ಗುರುತಿಸಲಾಗಿದೆ. ಮೋರಿಯಲ್ಲಿ ಬಿದ್ದಿದ್ದ ಸುರೇಶ್ ಅವರನ್ನು ಪಕ್ಕದ ಮನೆಯ, ಸೋಮೇಶ್ವರ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರೇಮಾನಂದ ಮತ್ತು ಅವರ ಸಂಬಂಧಿ ಧನರಾಜ್ ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಸುರೇಶ್ ಮೃತಪಟ್ಟಿದ್ದಾರೆ.