



ಮಂಗಳೂರು (ಬೆಂಗಳೂರು): ಹಣಕಾಸು ಖಾತೆ ಹೊಂದಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ಮಂಡಿಸಲಿದ್ದಾರೆ.







ಚುನಾವಣಾ ಪೂರ್ವ ಭರವಸೆಯಂತೆ ಅನ್ನಭಾಗ್ಯ, ಗೃಹಜೋತಿ, ಗೃಹಲಕ್ಷ್ಮಿ ಸೇರಿದಂತೆ ಐದು ಗ್ಯಾರಂಟಿ ಕಾರ್ಯಕ್ರಮಗಳ ಜಾರಿಗೆ ಸರಕಾರ ಸಿದ್ಧತೆ ಮಾಡಿಕೊಂಡಿದೆ. ಹೊಸ ಸರ್ಕಾರದ ಬಗ್ಗೆ ಜನರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿರುವುದರಿಂದ ಮುಖ್ಯಮಂತ್ರಿ ಮಂಡಿಸಲಿರುವ ಬಜೆಟ್ ಬಗ್ಗೆ ಜನರ ದೃಷ್ಟಿ ನೆಟ್ಟಿದ್ದು ಕುತೂಹಲ ಹೆಚ್ಚಿದೆ. ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯದಲ್ಲಿ 13 ಬಜೆಟ್ ಮಂಡಿಸಿದ್ದು ದಾಖಲೆ 14ನೇ ಬಜೆಟ್ ನ್ನು ಇಂದು ಮಂಡಿಸಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಖ್ಯಾತಿ ಸಿದ್ದರಾಮಯ್ಯ ಅವರದಾಗಲಿದೆ.














