ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ – ಬೈಕ್ ಸವಾರ ಸ್ಥಳದಲ್ಲಿ ಮೃತ್ಯು

ಮಂಗಳೂರು(ಉಡುಪಿ): ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜು.6ರ ಗುರುವಾರ ರಾತ್ರಿ ಬೆಳ್ಮಣ್ ಪೇಟೆಯಲ್ಲಿ ನಡೆದಿದೆ.
ಮೃತರನ್ನು ಪಿಲಾರು ನಿವಾಸಿ ಪ್ರವೀಣ್ (30)ಎಂದು ಗುರುತಿಸಲಾಗಿದೆ.


ಕಳೆದ ರಾತ್ರಿ ಭಾರಿ ಮಳೆ ಸುರಿಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಪ್ರವೀಣ್ ಕಾರ್ಕಳ – ಪಡುಬಿದ್ರೆ ರಾಜ್ಯ ಹೆದ್ದಾರಿಯ ಬೆಳ್ಮಣ್ ಪೇಟೆಯಲ್ಲಿ ತನ್ನ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ರಸ್ತೆ ಪಕ್ಕದಲ್ಲಿದ್ದ ಬೃಹತ್ ಗಾತ್ರದ ಮರ ಏಕಾಏಕಿ ಉರುಳಿ ಮೈಮೇಲೆ ಬಿದ್ದಿದೆ. ಮರದಡಿಯಲ್ಲಿ ಸಿಲುಕಿಕೊಂಡಿದ್ದ ಅವರನ್ನು ಸ್ಥಳೀಯರು ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದರಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಮರ ಉರುಳಿ ಬೀಳುವ ಎರಡು ಸೆಕೆಂಡುಗಳ ಮುಂಚೆ ಗೂಡ್ಸ್ ಟೆಂಪೋ ಇದೇ ರಸ್ತೆಯಲ್ಲಿ ಹಾದುಹೋಗಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದೆ.

LEAVE A REPLY

Please enter your comment!
Please enter your name here