ಮಾನಹಾನಿ ಪ್ರಕರಣ – ರಾಹುಲ್ ಗಾಂಧಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಮಂಗಳೂರು (ಗುಜರಾತ್): ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಇಂದು ವಜಾಗೊಳಿಸಿದೆ.

ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಅರ್ಜಿಯನ್ನು ಆಲಿಸಿದ್ದರು. ಮೇ 2ರಂದು ವಾದವನ್ನು ಮುಕ್ತಾಯಗೊಳಿಸಿ ಇಂದು ತೀರ್ಪು ಪ್ರಕಟಿಸಿದ್ದಾರೆ. ರಾಹುಲ್ ಗಾಂಧಿ ಪರ ವಾದಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘವಿ ಕ್ರಿಮಿನಲ್ ಮಾನ ನಷ್ಟದ ಆರೋಪದ ಪ್ರಕರಣದಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here