ಫಲಕ್​ನುಮಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ – 3 ಬೋಗಿಗಳು ಭಸ್ಮ

ಮಂಗಳೂರು (ಹೈದರಾಬಾದ್): ಹೌರಾ-ಸಿಕಂದರಾಬಾದ್ ಫಲಕ್​ನುಮಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 3 ಬೋಗಿಗಳು ಬೆಂಕಿಗಾಹುತಿಯಾಗಿವೆ. ಚಲಿಸುತ್ತಿದ್ದ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ತೆಲಂಗಾಣದ ಯಾದಾದ್ರಿ ಭುವನಗಿರಿಯಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ರೈಲಿನಿಂದ ಹಾರಿದ್ದಾರೆ. ಹಾಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ರೈಲಿನ ಮೂರು ಬೋಗಿಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಶಾರ್ಟ್​ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here