ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ವೇ – 6 ತಿಂಗಳಲ್ಲಿ 512 ಅಪಘಾತ, 123 ಸಾವು, 585 ಜನರಿಗೆ ಗಾಯ

ಮಂಗಳೂರು (ಬೆಂಗಳೂರು ): ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳ ಸೇರಿದಂತೆ ಇರುವ ನ್ಯೂನ್ಯತೆ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದ್ದು, ಸುರಕ್ಷಿತ ಪ್ರಯಾಣ ಮತ್ತು ನೂನ್ಯತೆ ಸರಿಪಡಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ವಿಧಾನಪರಿಷತ್ತಿನಲ್ಲಿ ಪರಿಷತ್ ಸದಸ್ಯ ಮರಿತಿಬ್ಬೆ ಗೌಡ
ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತಗಳು ಹೆಚ್ಚಾಗುತ್ತಿದೆ. ಟೋಲ್ ನಲ್ಲಿ ಜನರು ಗಲಾಟೆ ಮಾಡುತ್ತಿದ್ದಾರೆ. ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಲ್ಲುತ್ತದೆ ಎಂದಿರುವ ಸಚಿವರು ಈ ಬಗ್ಗೆ ಈಗಾಗಲೇ ಸಭೆ ಕರೆದು ಚರ್ಚಿಸಿರುವುದಾಗಿ ಹೇಳಿದ್ದಾರೆ.


ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಸಂಪೂರ್ಣವಾಗಿ ನಮ್ಮ ನಿಯಂತ್ರಣದಲ್ಲಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಂತ್ರಣದಲ್ಲಿದೆ. ಲೋಪಗಳಿದ್ದಲ್ಲಿ ಅದನ್ನು ಪ್ರಾಧಿಕಾರದ ಜೊತೆ ಸಂಪರ್ಕ ಮಾಡಿ ಚರ್ಚಿಸಲಾಗುತ್ತದೆ. ಅಪಘಾತಕ್ಕೆ ಅತಿ ವೇಗ ಕಾರಣ. ಕೆಲವೆಡೆ ಅವೈಜ್ಞಾನಿಕ ಸಮಸ್ಯೆ ಇದೆ. ಎಲ್ಲಾ ನಿಯಂತ್ರಣ ಮಾಡಲು ಕ್ರಮ ವಹಿಸಲಾಗುತ್ತದೆ. ಈ ಎಲ್ಲಾ ಸಮಸ್ಯೆಗಳ ಕುರಿತು ಕೇಂದ್ರ ಸಚಿವ ನಿತಿನ್ ರೆಡ್ಡಕರಿ ಗಮನಕ್ಕೂ ತರಲಾಗಿದೆ. 2023ರ ಜನವರಿಯಿಂದ ಇಲ್ಲಿಯವರೆಗೆ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ 512 ಅಪಘಾತಗಳು ವರದಿಯಾಗಿದೆ. ಇದರಲ್ಲಿ 123 ಜನರು ಸಾವನ್ನಪ್ಪಿದ್ದು, 585 ಮಂದಿ ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here