ಮಂಗಳೂರು (ಬೆಂಗಳೂರು): ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಲಿದ್ದಾರೆ.
ವಿಧಾನಸೌಧದ 3ನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಂಜೆ 5:00 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಪಿಎಲ್ ಪಡಿತರ ಫಲಾನುಭವಿಗಳಿಗೆ ನಗದು ನೀಡುವ ಯೋಜನೆಯನ್ನು ಸಿಎಂ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಆಹಾರ ಸಚಿವ ಕೆ ಎಚ್ ಮುನಿಯಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
ಶೇಕಡ 82ರಷ್ಟು ಪಡಿತರ ಚೀಟಿಗಳು ಆಧಾರ್ ನೊಂದಿಗೆ ಸಕ್ರಿಯ ಬ್ಯಾಂಕ್ ಖಾತೆಗಳೊಂದಿಗೆ ಜೋಡಣೆಯಾಗಿದೆ. ಈ ಕಾರ್ಡುದಾರರ ಖಾತೆಗಳಿಗೆ ನಗದು ವರ್ಗಾವಣೆ ಮಾಡಲಾಗುವುದು ಉಳಿದ ಕಾರ್ಡುದಾರರಿಗೆ ಖಾತೆ ತೆರೆಯಲು ಮಾಹಿತಿ ನೀಡಲಾಗುವುದು ಎಂದು ಸರಕಾರ ತಿಳಿಸಿದೆ.