ಮಂಗಳೂರು (ಬೆಂಗಳೂರು ):ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣದ ನೇರ ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡುವ ಮೂಲಕ ಯೋಜನೆಗೆ ಚಾಲನೆ ದೊರಕಿತು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಆಹಾರ ಸಚಿವ ಕೆ ಹೆಚ್ ಮುನಿಯಪ್ಪ , ಸಚಿವರಾದ ರಾಮಲಿಂಗಾರೆಡ್ಡಿ , ಬಿ ನಾಗೇಂದ್ರ , ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.