ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ – ದೆಹಲಿ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದಲ್ಲಿ ವರುಣಾರ್ಭಟ

ಮಂಗಳೂರು: ಭಾರೀ ಮಳೆ ಹಿನ್ನಲೆಯಲ್ಲಿ ದೆಹಲಿಯ ಯಮುನಾ ನದಿ ನೀರಿನ ಮಟ್ಟ 207.25 ಮೀಟರ್ ಗೆ ಏರಿಕೆಯಾಗಿದೆ.

ಮೇಲ್ಭಾಗದ ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆ ಮತ್ತು ವಾರಾಂತ್ಯದಲ್ಲಿ ದೆಹಲಿ ಮತ್ತು ಹತ್ತಿರದ ತಗ್ಗು ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ನೀರಿನ ಮಟ್ಟದಲ್ಲಿ ತೀವ್ರ ಏರಿಕೆಯಾಗಿದೆ. ತಗ್ಗು ಪ್ರದೇಶದಲ್ಲಿ ವಾಸಿಸುವ ಜನರನ್ನು ಎತ್ತರದ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಉತ್ತರ ಭಾರತದಲ್ಲಿ ಮಳೆ ಸಂಬಂಧಿ ಅನಾಹುತಗಳಲ್ಲಿ ಜು.11 ರಂದು 21 ಮಂದಿ ಮೃತ ಪಟ್ಟಿದ್ದಾರೆ. ಕಳೆದ 4 ದಿನಗಳಲ್ಲಿ ಮಳೆಗೆ ಬಲಿಯಾದವರ ಸಂಖ್ಯೆ 91ಕ್ಕೆ ಏರಿದೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here