ಮಂಗಳೂರು(ಬೆಂಗಳೂರು): ಬೆಂಗಳೂರಿನ ಎಚ್ಎಎಲ್ ಏರ್ ಪೋರ್ಟ್ ನಲ್ಲಿ ಜುಲೈ 11ರಂದು ಲಘು ವಿಮಾನವೊಂದು ತುರ್ತು ಭೂ ಸ್ಪರ್ಶ ಮಾಡಿದೆ.
ಎಚ್ ಎ ಎಲ್ ನಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಲಘು ವಿಮಾನ ಟೇಕ್ ಆಫ್ ಆದ ಕೆಲ ಹೊತ್ತಿನಲ್ಲಿ ಮುಂಭಾಗದ ವೀಲ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ತುರ್ತಾಗಿ ಮತ್ತೆ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ವಿಮಾನದಲ್ಲಿ ಇಬ್ಬರು ಪೈಲೆಟ್ ಗಳಿದ್ದು ಎರಡೇ ಚಕ್ರಗಳಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು. ತಾಂತ್ರಿಕ ದೋಷದಿಂದಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಲ್ಯಾಂಡಿಂಗ್ ವೇಳೆ ವಿಮಾನ ಮಗುಚಿ ಬೀಳುವ ಹಂತಕ್ಕೆ ಬಂದಿದ್ದರೂ, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.