ಮಂಗಳೂರು (ಡೆಹ್ರಾಡೂನ್): ಭಾರೀ ಮಳೆ ಸುರಿಯುತ್ತಿರುವ ಕಾರಣ ಉತ್ತರಾಖಂಡದ ಸೋನ್ ಪ್ರಯಾಗ್ ಮತ್ತು ಗೌರಿ ಕುಂಡ್ ನಲ್ಲಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೋನ್ ಪ್ರಯಾಗ್ ಮತ್ತು ಗೌರಿ ಕುಂಡ್ ನಲ್ಲಿ ಪ್ರತಿಕೂಲ ಹವಾಮಾನ ಇರುವ ಕಾರಣ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಭಾರೀ ಮಳೆಯ ಪರಿಣಾಮ ನಾಲ್ಕು ರಾಜ್ಯ ರಸ್ತೆ ಮತ್ತು 10 ಸಂಪರ್ಕ ರಸ್ತೆಗಳು ಮುಚ್ಚಿವೆ. ಅಲ್ಲದೆ ಧಾರಾಕಾರ ಮಳೆಯ ಪರಿಣಾಮ ಮಂದಾಕಿನಿ ಮತ್ತು ಅಲಕಾನಂದ ನದಿಗಳು ಉಕ್ಕಿ ಹರಿಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.