ಮಂಗಳೂರು (ಧರ್ಮಸ್ಥಳ): ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಅಕ್ರಮವಾಗಿ ಗೋ ಸಾಗಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲಿಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್, ಹಾಸನ ಜಿಲ್ಲೆಯ ಅರಕಲಗೂಡು ನಿವಾಸಿ ಚನ್ನಕೇಶವ ಮತ್ತು ಹೊಳೆ ನರಸೀಪುರ ನಿವಾಸಿ ಸಂದೀಪ್ ಹಿರೇ ಬೆಳಗುಳಿ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, ಆರು ದನ ಮತ್ತು ಎರಡು ಗಂಡು ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.