ಯಾರ್ಯಾರು ಪಾರ್ಟಿಗೆ ಬರಬೇಕು, ಇರಬೇಕು ಎನ್ನುವ ಬಗ್ಗೆ ರಾಷ್ಟ್ರೀಯ ನಾಯಕರು ತೀರ್ಮಾನಿಸುತ್ತಾರೆ‌ – ನಳಿನ್‌ ಕುಮಾರ್‌ ಕಟೀಲ್

ಮಂಗಳೂರು(ಪುತ್ತೂರು): ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಬಂದ ಮೇಲೆ ಶಾಂತಿ, ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸರಕಾರ ಬಂದ ಒಂದೂವರೆ ತಿಂಗಳಲ್ಲಿ ಹತ್ತಾರು ಕೊಲೆಗಳು ನಡೆದಿದ್ದು, ರಾಜ್ಯದ ಜನತೆ ಇದನ್ನೆಲ್ಲಾ ಗಮನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲ್‌ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ರೈತರ ಯೋಜನೆಗಳು ವಿಫಲವಾಗಿದ್ದು, ಸರಕಾರ ರೈತರಿಗೆ ಮೋಸ ಮಾಡುತ್ತಿದೆ. ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದ್ದು ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ರಾಷ್ಟ್ರೀಯ ನಾಯಕರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಹೇಳಿದರು. ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡುವುದಿಲ್ಲ ಪಕ್ಷದ ರಾಷ್ಟ್ರೀಯ ನಾಯಕರಲ್ಲಿ ಚರ್ಚೆ ನಡೆಸಲಾಗಿದೆ. ಅವರು ತೀರ್ಮಾನಿಸುತ್ತಾರೆ. ಪಕ್ಷೇತರ ಅಭ್ಯರ್ಥಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಹಿನ್ನೆಲೆಯಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಆಗಿದೆ ಎಂದು ಹೇಳಿದ ಅವರು ಪಕ್ಷಕ್ಕೆ ಯಾರು ಬರಬೇಕು, ಪಕ್ಷದಲ್ಲಿ ಯಾರು ಇರಬೇಕು ಎನ್ನುವುದನ್ನು ರಾಷ್ಟ್ರೀಯ ನಾಯಕರು ತೀರ್ಮಾನಿಸುತ್ತಾರೆ ಎಂದು ಹೇಳಿದರು. ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here