ಪ್ರಧಾನಿ ನರೇಂದ್ರ ಮೋದಿಗೆ ಫ್ರಾನ್ಸಿನ ಅತ್ಯುನ್ನತ ನಾಗರಿಕ ಪ್ರಶಸ್ತಿ

ಮಂಗಳೂರು (ಫ್ರಾನ್ಸ್): ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿಯವರಿಗೆ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್ ಅನ್ನು ನೀಡಿ ಗೌರವಿಸಲಾಗಿದೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮೋದಿ ಅವರಿಗೆ ಈ ಗೌರವ ಪ್ರಧಾನ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಈ ಗೌರವಕ್ಕೆ ಪಾತ್ರರಾದ ಮೊದಲ ಭಾರತೀಯ ಪ್ರಧಾನಿ ಎನಿಸಿಕೊಂಡಿದ್ದಾರೆ.

ಇಂದು ಫ್ರಾನ್ಸ್ ನಲ್ಲಿ ನಡೆಯಲಿರುವ ವಾರ್ಷಿಕ ಬಾಸ್ಟಿಲ್ ಡೇ ಪರೇಡ್ ನಲ್ಲಿ ಮೋದಿ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಬಾಸ್ಟಿಲ್ ಡೇ ಪರೇಡ್ ನಲ್ಲಿ 269 ಸೈನಿಕರನ್ನು ಒಳಗೊಂಡ ಭಾರತೀಯ ತ್ರಿಸೇವಾ ತುಕಡಿಯೂ ಭಾಗವಹಿಸಲಿದೆ. ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷರೊಂದಿಗೆ ರಕ್ಷಣೆ, ಬಾಹ್ಯಾಕಾಶ, ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರದ ಕುರಿತು ಮಾತುಕತೆ ನಡೆಸಲಿದ್ದಾರೆ.

LEAVE A REPLY

Please enter your comment!
Please enter your name here