ಗೃಹ ಜ್ಯೋತಿ – ಜುಲೈ 27 ಅರ್ಜಿ ಸಲ್ಲಿಕೆಗೆ ಕೊನೆಯ ದಿನ

ಮಂಗಳೂರು (ಬೆಂಗಳೂರು): ಗೃಹ ಜ್ಯೋತಿ ಯೋಜನೆ ಫಲಾನುಭವಿಯಾಗಲು ಜೂನ್ 18 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಸುಮಾರು ಒಂದು ಕೋಟಿಗೂ ಅಧಿಕ ಜನರು ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಯೋಜನೆ ಅಗಸ್ಟ್ ನಲ್ಲಿ ಜಾರಿಗೆ ಬರಲಿದ್ದು, ಯೋಜನೆ ಫಲಾನುಭವಿಯಾಗಲು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಮೊದಲು ಕಡೆಯ ದಿನಾಂಕವನ್ನು ನಿಗದಿಪಡಿಸಿರಲಿಲ್ಲ. ಈಗ ಕೊನೆಯ ದಿನಾಂಕವನ್ನು ನಿಗದಿಪಡಿಸಲು ನಿರ್ಧರಿಸಿದ್ದೇವೆ. ಅದರಂತೆ ಜುಲೈ 27 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ವಿಧಾನಸಭೆ ಕಲಾಪದಲ್ಲಿ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here