ಮಂಗಳೂರು(ಹೊಸದಿಲ್ಲಿ): ತಮ್ಮ ಪಕ್ಷಕ್ಕೆ ಅಧಿಕಾರ ಅಥವಾ ಪ್ರಧಾನಿ ಹುದ್ದೆಯ ಬಗ್ಗೆ ಆಸಕ್ತಿ ಇಲ್ಲ ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಡಳಿತ ಪಕ್ಷದ ಬಿಜೆಪಿ ಅಧ್ಯಕ್ಷರಾದ ಜೆ.ಪಿ. ನಡ್ಡಾ ಹಾಗೂ ಪಕ್ಷದ ನಾಯಕರು ಹಳೆಯ ಮಿತ್ರರನ್ನು ಒಟ್ಟುಗೂಡಿಸಲು “ರಾಜ್ಯದಿಂದ ರಾಜ್ಯಕ್ಕೆ ಓಡುತ್ತಿದ್ದಾರೆ” ಎಂದು ಹೇಳಿದರು.
“ನಮ್ಮೊಂದಿಗೆ 26 ಪಕ್ಷಗಳಿದ್ದು, 11 ರಾಜ್ಯಗಳಲ್ಲಿ ನಮ್ಮ ಸರಕಾರವಿದೆ. ಬಿಜೆಪಿ ಸ್ವಂತ ಶಕ್ತಿಯಿಂದ 303 ಸ್ಥಾನಗಳನ್ನು ಪಡೆಯಲಿಲ್ಲ, ಮಿತ್ರಪಕ್ಷಗಳ ಮತಗಳನ್ನು ಬಳಸಿ ನಂತರ ಅವುಗಳನ್ನು ತಿರಸ್ಕರಿಸಿದೆ” ಎಂದು ಖರ್ಗೆ ಪ್ರತಿಪಕ್ಷಗಳ ಸಭೆಯಲ್ಲಿ ಹೇಳಿದರು ಎಂದು NDTV ವರದಿ ಮಾಡಿದೆ.
ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವ ಕುರಿತಂತೆ ರೂಪರೇಖೆಗಳನ್ನು ಈ ಸಭೆಯಲ್ಲಿ ನಿರ್ಧರಿಸಲಾಗುವುದು. ಯುಪಿಎ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವರನ್ನು ಪ್ರತಿಪಕ್ಷಗಳ ಒಕ್ಕೂಟದ ಅಧ್ಯಕ್ಷರನ್ನಾಗಿ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ನೇಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.