ಮಂಗಳೂರು : ಶಾಂತಿ ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಹಾಗೂ ಮುಕ್ತ ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಇದೀಗ ಚುನಾವಣೆ ಘೋಷಣೆಯಾಗಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಇಡುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಅರ್ಯಾಪು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮತ್ತು ಉಜಿರೆ ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ನಲ್ಲಿ ಚುನಾವಣೆಗಳು ನಡೆಯಲಿವೆ.