ಜುಲೈ 27ರಂದು ಆಟೋ ಕ್ಯಾಬ್ ಖಾಸಗಿ ಬಸ್ ಸಂಚಾರ ಬಂದ್

ಮಂಗಳೂರು (ಬೆಂಗಳೂರು ): ಜುಲೈ 27ರಂದು ಆಟೋ ಕ್ಯಾಬ್ ಹಾಗೂ ಖಾಸಗಿ ಬಸ್ ಗಳ ಮಾಲೀಕರು ಹಾಗೂ ಚಾಲಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದರಿಂದಾಗಿ ಜುಲೈ 26ರ ಮಧ್ಯರಾತ್ರಿ 12ರಿಂದ 27ರ ಮಧ್ಯೆ ರಾತ್ರಿಯವರೆಗೂ ರಾಜ್ಯಾದ್ಯಂತ ಆಟೋ ಕ್ಯಾಬ್ ಹಾಗೂ ಖಾಸಗಿ ಬಸ್ಸುಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ರಾಜ್ಯ ಸರಕಾರದ ಕೆಲವು ನೀತಿಗಳಿಂದ ಖಾಸಗಿ ಸಾರಿಗೆ ನಷ್ಟವಾಗುತ್ತಿದೆ.. ಈ ಬಗ್ಗೆ ಸರಕಾರವನ್ನು ಎಚ್ಚರಿಸಲು ಖಾಸಗಿ ಸಾರಿಗೆ ವಾಹನಗಳ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ.


ಶಕ್ತಿ ಯೋಜನೆ, ವೈಟ್ ಬೋರ್ಡ್ ವಾಹನವನ್ನು ವಾಣಿಜ್ಯ ವಾಹನವಾಗಿ ಉಪಯೋಗಿಸುತ್ತಿರುವುದು, ದ್ವಿಚಕ್ರ ವಾಹನಗಳಿಗೆ ಮುಕ್ತ ಪರವಾನಗಿ ನೀಡುತ್ತಿರುವುದು ಸೇರಿದಂತೆ ಹಲವು ಯೋಜನೆಗಳಿಂದ ಖಾಸಗಿ ಸಾರಿಗೆ ನೆಲಕಚ್ಚಿ ಹೋಗಿದೆ ಎಂದು ಖಾಸಗಿ ಸಾರಿಗೆ ಮಾಲೀಕರು ಆರೋಪಿಸಿದ್ದಾರೆ. ಸರಕಾರದ ಈ ನೀತಿಗಳಿಂದ ಆಟೋ ಕ್ಯಾಬ್ ಹಾಗೂ ಖಾಸಗಿ ಬಸ್ ಚಾಲಕರು ಸಾಲ ವಿಮೆ ಕಟ್ಟಲು ಮತ್ತು ಜೀವನ ಸಾಗಿಸಲು ಕಷ್ಟಪಡುವಂತಾಗಿದೆ. ಇದರಿಂದ ರಾಜ್ಯದ 23 ಸಾರಿಗೆ ಸಂಘಟನೆಗಳು ಸೇರಿ ಪ್ರತಿಭಟನೆಗೆ ಮುಂದಾಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here