ಮಂಗಳೂರು (ಇಂಫಾಲ): ಶುಕ್ರವಾರ ಮುಂಜಾನೆ ಸುಮಾರು ಐದರ ಸುಮಾರಿಗೆ ಮಣಿಪುರದ ಉಖ್ರುಲ್ ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ತಿಳಿಸಿದೆ. ಭೂಮಿಯ 20 ಕಿಲೋ ಮೀಟರ್ ಆಳದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಂಪನದ ಅನುಭವವಾಗುತ್ತಿದ್ದಂತೆ ಜನ ಭಯಭೀತರಾಗಿ ಮನೆಯಿಂದ ಹೊರ ಬಂದಿದ್ದಾರೆ. ಭೂಕಂಪದಿಂದ ಯಾವುದೇ ಜೀವ ಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ಮಾಹಿತಿ ಬಂದಿಲ್ಲ.
ಇನ್ನು ಶುಕ್ರವಾರ ಮುಂಜಾನೆ ರಾಜಸ್ಥಾನದ ಜೈಪುರದ ಮೂರು ಭಾಗಗಳಲ್ಲಿ 30 ನಿಮಿಷಗಳ ಅವಧಿಯಲ್ಲಿ ಮೂರು ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. ಬೆಳಿಗ್ಗೆ 4:09 ರ ಸುಮಾರಿಗೆ 4.4ರ ತೀವ್ರತೆ ಹೊಂದಿದ್ದರೆ, 4:22ರ ಸುಮಾರಿಗೆ 3.1ರ ತೀವ್ರತೆ ಹಾಗೂ 4:25ರ ಸುಮಾರಿಗೆ 3.4ರ ತೀವ್ರತೆಯ ಭೂಕಂಪದ ಅನುಭವವಾಗಿದೆ.
ವೀಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
What a scary day to witness such a high magnitude #earthquake in #Jaipur.
I hope you all are safe! #जयपुर में #भूकंप के झटके Rajasthan #ViratKohli? #WIvIND Kukis #Manipur #मणिपुर Bengal Baakhabar Sant Rampal कुकी समुदाय Gill pic.twitter.com/F4RTZiJSAZ— Virat Kohli (@imVKohli___18) July 21, 2023