ಮಂಗಳೂರು (ದೆಹಲಿ): ಮೋದಿ ಉಪನಾಮದ ಟೀಕೆಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಅರ್ಜಿ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿ ಮನವಿ ಮೇರೆಗೆ ಗುಜರಾತ್ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
ಪೂರ್ಣೇಶ್ ಮೋದಿಗೂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ನೋಟಿಸ್‌ಗೆ ಉತ್ತರಿಸಲು ಪೂರ್ಣೇಶ್ ನ್ಯಾಯಾಲಯದಿಂದ 21 ದಿನಗಳ ಕಾಲಾವಕಾಶ ಕೋರಿದ್ದರು, ಆದರೆ ನ್ಯಾಯಾಲಯ ಅವರಿಗೆ 10 ದಿನಗಳ ಕಾಲಾವಕಾಶ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 4 ರಂದು ನಡೆಯಲಿದೆ.
ಇದಕ್ಕೂ ಮುನ್ನ ರಾಹುಲ್ ಗಾಂಧಿ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿತ್ತು. ಅವರು ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.