ಕಳಸ, ಶೃಂಗೇರಿಯಲ್ಲಿ ಭಾರೀ ಮಳೆ

ಮಂಗಳೂರು(ಚಿಕ್ಕಮಗಳೂರು): ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿದ್ದು ಹಲವೆಡೆ ಭಾರೀ ಅವಾಂತರಗಳನ್ನು ಸೃಷ್ಠಿಸಿದೆ. ಜಿಲ್ಲೆಯ ಕಳಸ ಸಮೀಪದಲ್ಲಿ ಹರಿಯುವ ಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಪೊಲೀಸರು ಎರಡೂ ಸೈಡ್ ಬ್ಯಾರಿಕೇಡ್ ಹಾಕಿ ಸಂಚಾರ ನಿಯಂತ್ರಿಸಿದ್ದಾರೆ.
ಶೃಂಗೇರಿ ತಾಲೂಕಿನಾದ್ಯಂತ ಭಾರೀ ಮಳೆ ಹಿನ್ನೆಯಲ್ಲಿ ತುಂಗಾ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲಲ್ಲಿ ಮರಗಳು ಉರುಳಿ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ನದಿ ಪಾತ್ರದ ಗ್ರಾಮಗಳಲ್ಲಿ ಜಿಲ್ಲಾಡಳಿತ ಮುಂಜಾಗೃತ ಕ್ರಮ ವಹಿಸಿದೆ. ಪ್ರವಾಸಿಗರು, ಅನ್ನಪೂರ್ಣೇಶ್ವರಿ ದರ್ಶನಕ್ಕೆ ಬಂದ ಭಕ್ತರು ಮಳೆಯಿಂದಾಗಿ ಪರದಾಡುವಂತಾಗಿದೆ.

LEAVE A REPLY

Please enter your comment!
Please enter your name here