ದ.ಕ ದಲ್ಲಿ ಭಾರೀ ಮಳೆ ಸಾಧ್ಯತೆ – ರೆಡ್‌ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಗುಡುಗು ಸಹಿತ ಮಳೆ ಪ್ರಮಾಣ ಹೆಚ್ಚಾಗಳಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ.

ಜು.26 ಮತ್ತು 27 ರಂದು ಈ ಮೂರು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಜು.28 ಮತ್ತು 29 ರಂದು ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಜು.25 ರಂದು ಆರೆಂಜ್‌ ಅಲರ್ಟ್‌ ಘೋಷಿಸಿದೆ. ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜು.26, 27, 28 ರಂದು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here