ಮಂಗಳೂರು(ಬೆಂಗಳೂರು): ಆರ್‌ಬಿಐ ನಿಯಮದಂತೆ ನೋಟು ಚಲಾವಣೆ ಮಾಡಲು ಸಾಧ್ಯವಿಲ್ಲವೆಂದರಿತ ದುಷ್ಕರ್ಮಿಗಳು 2000 ರೂ. ಮುಖಬೆಲೆಯ ಕಂತೆ ಕಂತೆ ನಕಲಿ ನೋಟುಗಳನ್ನು ಬೆಂಗಳೂರಿನ ಕನಕಪುರ ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದಾರೆ.
ಕನಕಪುರ ರಸ್ತೆಯ ಪಕ್ಕದಲ್ಲಿ ಬಿದ್ದಿದ್ದ ಎರಡು ಬಾಕ್ಸ್ ಜೆರಾಕ್ಸ್ ನೋಟುಗಳನ್ನು ಸಾರ್ವಜನಿಕರು ನೋಡಿ ಸಂಚಾರಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಸಂಚಾರಿ ಪೊಲೀಸರು ಕೂಡಲೇ ತಲಘಟ್ಟಪುರ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಜೆರಾಕ್ಸ್ ನೋಟುಗಳನ್ನ ಪರಿಶೀಲಿಸಿ ವಶಕ್ಕೆ ಪಡೆದಿದ್ದಾರೆ. ಜೆರಾಕ್ಸ್ ನೋಟುಗಳು ಅಲ್ಲಿಗೆ ಹೇಗೆ ಬಂದವು? ಎಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.