ಉದ್ಯಾನವನದಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ರಾಡಿನಿಂದ ಥಳಿಸಿ ಹತ್ಯೆ

ಮಂಗಳೂರು (ದೆಹಲಿ ): ರಾಡಿನಿಂದ ಹೊಡೆದು ಕಾಲೇಜು ವಿದ್ಯಾರ್ಥಿನಿ ಒಬ್ಬಳನ್ನು ಶುಕ್ರವಾರ ದಿಲ್ಲಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಿಲ್ಲಿಯ ಮಾಳವೀಯ ನಗರದ ಅರಬಿಂದೋ ಕಾಲೇಜು ಬಳಿಯ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಮೃತಪಟ್ಟ ಯುವತಿ ಕಮಲ ನೆಹರು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ತನ್ನ ಸ್ನೇಹಿತನೊಂದಿಗೆ ಉದ್ಯಾನವನಕ್ಕೆ ಬಂದಿದ್ದಳು. ವಿದ್ಯಾರ್ಥಿನಿಗೆ ರಾಡಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾದ 28 ವರ್ಷದ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ.

ಟ್ವೀಟ್‌ ಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here