ಮಂಗಳೂರಿನಿಂದ ಕಾರ್ಗಿಲ್ ಗೆ ಬೈಕ್ ಮೂಲಕ ದಂಪತಿಗಳ ಪಯಣ

ಮಂಗಳೂರು: ಮಂಗಳೂರು ನಗರದ ಮುಸ್ಲಿಂ ದಂಪತಿ ರಕ್ತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮಂಗಳೂರಿನಿಂದ ಕಾರ್ಗಿಲ್ ಗೆ ಬೈಕ್ ಮೂಲಕ ಪ್ರಯಾಣಕ್ಕೆ ಮುಂದಾಗಿದ್ದಾರೆ. ಜೀವ ರಕ್ಷಕ ಕಲೆಯ ಕೋಚ್ ಹಾಗೂ ಪ್ರೇರಣಾತ್ಮಕ ಭಾಷಣಕಾರರಾಗಿ ಗುರುತಿಸಿಕೊಂಡಿರುವ ಸೈಫ್ ಸುಲ್ತಾನ್ ಮತ್ತು ಅದಿಲಪರ್ಹಿನ್ ತಮ್ಮ ಬಿಎಂಡಬ್ಲ್ಯೂ ಬೈಕ್ ಮೂಲಕ ಕಾರ್ಗಿಲ್ ಗೆ ಪ್ರಯಾಣ ಬೆಳೆಸಲಿದ್ದಾರೆ. ನಾಲ್ಕು ಸಾವಿರ ಕಿಲೋಮೀಟರ್ ಗಳ 19 ದಿನಗಳ ತಮ್ಮ ಬೈಕ್ ಪಯಣದ ವೇಳೆ ದೇಶಪ್ರೇಮದ ಸಂದೇಶವನ್ನು ಸಾರುವುದರ ಜೊತೆಗೆ ಹಿಜಾಬ್ ಬಗೆಗಿನ ತಪ್ಪು ತಿಳುವಳಿಕೆಯನ್ನು ನಿವಾರಿಸುವ ಹಾಗೂ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಆರ್ ಜೈನ್ ಪಯಣದ ಬೈಕನ್ನು ಅನಾವರಣಗೊಳಿಸಲಿದ್ದಾರೆ. ಬೈಕ್ ದಿನಕ್ಕೆ ಸುಮಾರು 300 ರಿಂದ 400 ಕಿಲೋಮೀಟರ್ ಪ್ರಯಾಣಕ್ಕೆ ಯೋಗ್ಯವಾಗುವ ರೀತಿಯಲ್ಲಿ ಮಾರ್ಪಡಿಸಲಾಗಿದೆ ಎಂದು ಸೈಫ್ ಸುಲ್ತಾನ್ ತಿಳಿಸಿದ್ದಾರೆ. ದಂಪತಿಗಳು ಹೊನ್ನಾವರ, ಬೆಳಗಾವಿ, ಪುಣೆ, ಮುಂಬೈ, ಸೂರತ್, ಅಹಮದಾಬಾದ್, ಉದಯಪುರ, ಜೈಪುರ, ದಿಲ್ಲಿ, ಅಮೃತ ಸರ್, ಜಮ್ಮು ಮತ್ತು ಶ್ರೀನಗರ ಮೂಲಕ ಸಾಗಿ ಆ.15ರಂದು ಕಾರ್ಗಿಲ್ ತಲುಪಲಿದ್ದಾರೆ.

LEAVE A REPLY

Please enter your comment!
Please enter your name here