ಅಪ್ರಾಪ್ತ ಬಾಲಕಿಯ ಅತ್ಯಾಚಾರ ಆರೋಪಿ ಸೆರೆ

ಮಂಗಳೂರು: ಬಾಲಕಿಯನ್ನು ಅತ್ಯಾಚಾರ ಮಾಡಿ ಆಕೆ ಗರ್ಭ ಧರಿಸಲು ಕಾರಣನಾದ ಆರೋಪಿ ಉಳ್ಳಾಲ ಪೇಟೆಯ ಶಾಪಿ ಎಂಬತನನ್ನು ಮಂಗಳೂರಿನ ಮಹಿಳಾ ಪೊಲೀಸರು ಮತ್ತು ಉಳ್ಳಾಲ ಪೊಲೀಸರು ಜುಲೈ 29ರಂದು ಬಂಧಿಸಿದ್ದಾರೆ.

ಎಂಟನೇ ತರಗತಿಯಲ್ಲಿ ಕಲಿಯುತ್ತಿರುವ 12 ವರ್ಷ ಪ್ರಾಯದ ಬಾಲಕಿಯನ್ನು ಆರೋಪಿಯು ಹಲವು ಬಾರಿ ಅತ್ಯಾಚಾರ ಎಸೆಗಿದ್ದ ಎಂದು ಆರೋಪಿಸಿ ಮಹಿಳಾ ಠಾಣೆಗೆ ಜುಲೈ 15 ರಂದು ದೂರು ನೀಡಲಾಗಿತ್ತು. ಬಾಲಕಿ ಆರು ತಿಂಗಳ ಗರ್ಭಿಣಿಯಾಗಿದ್ದು ಆಕೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಜುಲೈ 29ರಂದು ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮಂಗಳೂರು ಮಹಿಳಾ ಠಾಣೆಯ ನಿರೀಕ್ಷಕ ಲೋಕೇಶ್ ಎ ಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here