ಜಿಲ್ಲೆಗೆ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ- ದಿನೇಶ್‌ ಗುಂಡೂರಾವ್

ಮಂಗಳೂರು:ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆಯುತ್ತಿವೆ.ಇದನ್ನು ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಎಂದಿಗೂ ಅವಕಾಶ ನೀಡೋದಿಲ್ಲ ಎಂದು  ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಕಾನೂನನ್ನು ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು,ಭಯ ಸೃಷ್ಠಿಸೋದನ್ನು ಸಹಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಪೊಲೀಸರಿಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ.ಇಂತಹ ಘಟನೆಗಳನ್ನು ಸಹಿಸಲು ಸಾಧ್ಯ ಇಲ್ಲ, ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಮಂಗಳೂರಿಗೆ ವಿದ್ಯಾರ್ಜನೆಗೆ ಬರಲು ಭಯ ಆಗುತ್ತಿದೆ. ಆಡ್ಮಿಷನ್ ಆಗಿದೆ ಕಾಲೇಜಿಗೆ ಹೋಗಲು ಭಯ ಆಗುತ್ತಿದೆ ಅಂತಾ ವಿದ್ಯಾರ್ಥಿಗಳು ನನಗೆ ಹೇಳಿದರು.ಭಯ ಪಡಬೇಡಿ ಅಂತಾ ವಿದ್ಯಾರ್ಥಿಗಳನ್ನು ಕಳುಹಿಸಿದ್ದೇನೆ. ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ಈ ಕೆಲಸ ನಡೆಯುತ್ತಿದೆ. ಈ ಕೆಲಸಕ್ಕೆ ಮತೀಯವಾದಿ ಶಕ್ತಿಗಳು ಸೇರಿಕೊಳ್ಳುತ್ತಿವೆ. ಈ ಕೆಲಸ ಮಾಡುವವರನ್ನು ಗಡಿಪಾರು ಮಾಡುತ್ತೇವೆ. ಇಂತಹ ಕ್ರಿಮಿನಲ್ ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ. ಬಿಜೆಪಿ ಜಿಲ್ಲೆಯ ಶಾಂತಿಗೆ ಸಹಕಾರವನ್ನು ನೀಡಬೇಕು ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.

 

 

LEAVE A REPLY

Please enter your comment!
Please enter your name here