ಪ್ರವಾಸಿಗರ ಸೆಲ್ಫಿ,‌ ರೀಲ್ಸ್ ಹುಚ್ಚು – ಜಲಪಾತದ ಸ್ಥಳಗಳಲ್ಲಿ ಪೊಲೀಸರ ನಿಯೋಜನೆ

ಮಂಗಳೂರು: ಕೆಲವು ದಿನಗಳ ಹಿಂದೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್‌ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ಶರತ್‌ ಎಂಬ ಹುಡುಗ ಸಾವನ್ನಪ್ಪಿದ ಘಟನೆಯ ಬಳಿಕವೂ ಪ್ರವಾಸಿಗರು ಅಪಾಯಕಾರಿ ಸ್ಥಿತಿಯಲ್ಲಿ ಸೆಲ್ಫಿ, ರೀಲ್ಸ್ ಮಾಡುವುದು ಮುಂದುವರಿದಿದ್ದು ಹಲವು ದುರಂತ ಘಟನೆಗಳಿಗೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿಯಲ್ಲಿರುವ ಜಲಪಾತದ ಸ್ಥಳದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಈ ಸ್ಥಳಗಳಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿ ಸೆಲ್ಫಿ ತೆಗೆದುಕೊಳ್ಳುವುದು, ರಸ್ತೆ ಮಧ್ಯೆ ಕುಣಿಯುವುದು, ಜಾರುವ ಬಂಡೆಗಳ ಮೇಲೆ ಹತ್ತಿ ಫೋಟೋ ತೆಗೆಯುವುದನ್ನು ಮುದುವರೆಸಿದ್ದು ಇದಕ್ಕೆ ಕಡಿವಾಣ ಹಾಕಲು ಇಂತಹ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

 

LEAVE A REPLY

Please enter your comment!
Please enter your name here