ಮಂಗಳೂರು ಜಂಕ್ಷನ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ

    ಮಂಗಳೂರು: ಮಂಗಳೂರು ಜಂಕ್ಷನ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆ.6 ರಂದು ಶಿಲಾನ್ಯಾಸ ನೆರವೇರಲಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಡಿ ರವಿವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ವೀಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸಲಿದ್ದಾರೆ.

    ಅಂತಾರಾಷ್ಟ್ರೀಯ ಮಟ್ಟದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು 19.32 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ. 2023-24ನೆ ಸಾಲಿನ ಬಜೆಟ್‌ ನಲ್ಲಿ ದ.ಕ. ಜಿಲ್ಲೆಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಅಭಿವೃದ್ಧಿ ಪಡಿಸಲು ಘೋಷಣೆ ಮಾಡಲಾಗಿತ್ತು. ಈ ಕುರಿತಂತೆ ಸಂಸದ ನಳಿನ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಅಭಿನಂದಿಸಿದ್ದಾರೆ.

    LEAVE A REPLY

    Please enter your comment!
    Please enter your name here