ಇಂದಿನಿಂದ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಮಂಗಳೂರು(ಬೆಂಗಳೂರು): ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

LEAVE A REPLY

Please enter your comment!
Please enter your name here