ಮಂಗಳೂರು: ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಬಜಪೆ ಠಾಣಾ ಪೊಲೀಸರು ಕಾರೊಂದರಲ್ಲಿ ಮಾದಕ ವಸ್ತು ಚರಸ್ ಅನ್ನು ಸಾಗಾಟ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸೂರಿಂಜೆ ನಿವಾಸಿ ಅಬ್ದುಲ್ ಅಝೀಜ್ ಎಂದು ಗುರುತಿಸಲಾಗಿದ್ದು, ಮೂಡಬಿದ್ರೆ ತೋಡಾರು ನಿವಾಸಿ ಕ್ಯಾಬರೆ ಪೈಜಲ್ ಎಂಬಾತ ಪರಾರಿಯಾಗಿದ್ದಾನೆ.
ಬಜಪೆ ಠಾಣಾ ಪೋಲಿಸರು ಮುರ ನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯದಲ್ಲಿ ನಂಬರ್ ಪ್ಲೇಟ್ ಇಲ್ಲದ ಕಂದು ಬಣ್ಣದ ಸ್ವಿಫ್ಟ್ ಕಾರ್ ನ ಚಾಲಕನಿಗೆ ನಿಲ್ಲಿಸಲು ಸೂಚನೆ ನೀಡಿದಾಗ ಕಾರು ಚಾಲಕನು ಕಾರನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದ. ಆದರೆ ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ತಕ್ಷಣ ಪೊಲೀಸರು ಕಾರಿನ ಬಳಿ ತೆರಳಿದಾಗ ಕಾರಿನಲ್ಲಿದ್ದ ಓರ್ವ ಓಡಿ ಹೋಗಿದ್ದು, ಇನ್ನೋರ್ವ, ಸೂರಿಂಜೆ ನಿವಾಸಿ ಅಬ್ದುಲ್ ಅಝೀಜ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಬಳಿಕ ಕಾರನ್ನು ಪರಿಶೀಲನೆ ಮಾಡಿದಾಗ ಕಾರಿನಲ್ಲಿ ಸುಮಾರು 250 ಗ್ರಾಂ ತೂಕದ ಮಾದಕ ವಸ್ತು ಚರಸ್ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು 7 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಬಳಿಕ ಕಾರನ್ನು ಪರಿಶೀಲನೆ ಮಾಡಿದಾಗ ಕಾರಿನಲ್ಲಿ ಸುಮಾರು 250 ಗ್ರಾಂ ತೂಕದ ಮಾದಕ ವಸ್ತು ಚರಸ್ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು 7 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ತಪ್ಪಿಸಿಕೊಂಡಿರುವ ಕ್ಯಾಬರೆ ಪೈಜಲ್ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಬಜಪೆ ಪೋಲಿಸ್ ಠಾಣಾ ಇನ್ಸ್ಪೆಕ್ಟರ್ ಪ್ರಕಾಶ್ ಅವರ ನೇತೃತ್ವದ ಪೋಲಿಸರ ತಂಡ ಆರೋಪಿಗಳ ಪತ್ತೆಯಲ್ಲಿ ಭಾಗವಹಿಸಿದೆ.