ಮಂಗಳೂರು : ಮಹಿಳೆಯೊಬ್ಬರು ಸ್ನಾನ ಮಾಡುತ್ತಿರುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ವೇಳೆ ಯುವಕನೊಬ್ಬ ಸಿಕ್ಕಿ ಬಿದ್ದಿರುವ ಘಟನೆ ಮಂಗಳೂರು ಕಮಿಷನರೇಟ್ ನ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಯುವಕನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತು ಪೂಜಾರಿ (22) ಎಂದು ಗುರುತಿಸಲಾಗಿದೆ.
ಮುಲ್ಕಿಯ ಕೆಮರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಕೆರೆ ಹೊಸ ಕಾಡು ಎಂಬಲ್ಲಿ ಕಳೆದ ಬುಧವಾರ ರಾತ್ರಿ 11 ಘಂಟೆಗೆ ಈ ಘಟನೆ ನಡೆದಿದ್ದು ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಸುಮಂತ್ ತನ್ನ ನೆರೆಮನೆಯ ಮಹಿಳೆ ಸ್ನಾನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದ. ಈ ವೇಳೆ ಮೊಬೈಲ್ ಕ್ಯಾಮೆರಾ ಗಮನಿಸಿದ ಮಹಿಳೆ ಕಿರುಚಿದ್ದು, ಮಹಿಳೆ ಮನೆಯವರು ಸುಮಂತನನ್ನು ಹಿಡಿದು ಥಳಿಸಿದ್ದರು. ಆರೋಪಿ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಆರೋಪಿಯನ್ನು ಬಂಧಿಸಿದ್ದಾರೆ.
ಈ ನಡುವೆ ಬಂಧನಕ್ಕೊಳಗಾಗಿರುವ ಸುಮಂತ್ ನಮ್ಮ ಸಂಘಟನೆಗೆ ಸೇರಿದವನಲ್ಲ ಎಂದು ಭಜರಂಗ ದಳ ಹೇಳಿದೆ.