ರಾಹುಲ್‌ ಗಾಂಧಿ ಸಂಸದ ಸ್ಥಾನ ಮರು ಸ್ಥಾಪಿಸಿದ ಲೋಕಸಭಾ ಸ್ಪೀಕರ್

ಮಂಗಳೂರು(ನವದೆಹಲಿ): ಲೋಕಸಭಾ ಸಮಸ್ಯತ್ವದಿಂದ ಅನರ್ಹರಾಗಿದ್ದ ರಾಹುಲ್‌ ಗಾಂಧಿ ಅವರು ತಮ್ಮ ಸಂಸದ ಸ್ಥಾನವನ್ನು ಮರಳಿ ಪಡೆದಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ರಾಹುಲ್‌ ಅನರ್ಹತೆ ಆದೇಶವನ್ನು ಹಿಂಪಡೆದುಕೊಂಡಿದ್ದಾರೆ. ಮೋದಿ ಉಪನಾಮ ಟೀಕೆ ಪ್ರಕರಣದಲ್ಲಿ ಸೂರತ್‌ ನ್ಯಾಯಾಲಯವು ರಾಹುಲ್‌ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ಬೆನ್ನಲ್ಲೇ, ರಾಹುಲ್‌ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಲೋಕಸಭಾ ಸ್ಪೀಕರ್ ಆದೇಶಿದ್ದರು.

ರಾಹುಲ್‌ಗಾಂಧಿ ತಮ್ಮ ವಿರುದ್ಧ ಜೈಲು ಶಿಕ್ಷೆ ಮತ್ತು ಅನರ್ಹತೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಶಿಕ್ಷೆ ಮತ್ತು ಅರ್ನಹತೆಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿ ಶುಕ್ರವಾರ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ, ಅವರ ಸಂಸತ್ ಸದಸ್ಯತ್ವವನ್ನು ಲೋಕಸಭಾ ಸ್ಪೀಕರ್ ಮರು ಸ್ಥಾಪಿಸಿದ್ದಾರೆ.
2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ರಾಹುಲ್‌, ‘ಎಲ್ಲ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ’ ಎಂದಿದ್ದರು. ಅವರ ಈ ಹೇಳಿಕೆಯ ವಿರುದ್ಧ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಎಂಬವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

LEAVE A REPLY

Please enter your comment!
Please enter your name here