ಮಂಗಳೂರು: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ನಡೆದ ವೀಡಿಯೋ ಶೂಟಿಂಗ್ ಪ್ರಕರಣದ ತನಿಖೆಯನ್ನು ಸಿಐಡಿ ಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಜುಲೈ 18ರಂದು ನಡೆದಿದ್ದ ಘಟನೆ ಬಾರಿ ಚರ್ಚೆಗೆ ಗ್ರಾಸವಾಗಿದ್ದು ಎಬಿವಿಪಿ ಬಿಜೆಪಿ ಸೇರಿದಂತೆ ಅನೇಕ ಸಂಘಟನೆಗಳು ಈ ಘಟನೆಯನ್ನು ವಿರೋಧಿಸಿ ಪ್ರತಿಭಟನೆ ಮಾಡಿತ್ತು. ಪ್ರಕರಣದ ತನಿಖೆ ಎಸ್ಐಟಿ ಮಾಡಬೇಕೆಂದು ಒತ್ತಾಯಿಸಿ ರಾಜ್ಯಪಾಲರಿಗೆ ರಾಜ್ಯ ಬಿಜೆಪಿ ಮನವಿಯನ್ನು ಮಾಡಿತ್ತು.
ಇದೊಂದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿ ಗೆ ವಹಿಸಿ ಆದೇಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.