ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಪ್ರಸ್ತಾವನೆಯೇ ಇಲ್ಲ – ಕೇಂದ್ರ ಸಚಿವ

ಮಂಗಳೂರು: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಯಾವುದೇ ಉದ್ದೇಶವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಅವರು ಇಂದು ಸಂಸತ್ತಿನಲ್ಲಿ ಈ ಮಾಹಿತಿ ನೀಡಿದರು.

ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ‘ಗೋಮಾತೆ’ಯನ್ನು ರಾಷ್ಟ್ರೀಯ ಪ್ರಾಣಿ ಎಂದು ಸರ್ಕಾರ ಗುರುತಿಸಲು ಹೊರಟಿದೆಯೇ ಎಂದು ಬಿಜೆಪಿ ಸಂಸದ ಭಗೀರಥ ಚೌಧರಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದರು.

‘ಭಾರತ ಸರ್ಕಾರವು ಹುಲಿ ಮತ್ತು ನವಿಲುಗಳನ್ನು ರಾಷ್ಟ್ರೀಯ ಪ್ರಾಣಿ ಮತ್ತು ರಾಷ್ಟ್ರೀಯ ಪಕ್ಷಿ ಎಂದು ಗುರುತಿಸಿದೆ. ಈ ಎರಡೂ ಜೀವಿಗಳನ್ನು ವನ್ಯಜೀವಿ (ರಕ್ಷಣೆ) ಕಾಯಿದೆ, 1972 ರ ವೇಳಾಪಟ್ಟಿ-I ರಲ್ಲಿ ಸೇರಿಸಲಾಗಿದೆ. 2011ರ ಮೇ 30ರಂದು ಹುಲಿ ಮತ್ತು ನವಿಲನ್ನು ರಾಷ್ಟ್ರೀಯ ಪ್ರಾಣಿ ಮತ್ತು ರಾಷ್ಟ್ರೀಯ ಪಕ್ಷಿ ಎಂದು ಮರು-ಅಧಿಸೂಚನೆ ಮಾಡಿತು.ಈ ಹಿನ್ನೆಲೆಯಲ್ಲಿ ಈಗಿರುವ ಕಾಯ್ದೆಯಲ್ಲಿ ಯಾವುದೇ ಬದಲಾವಣೆ ತರುತ್ತಿಲ್ಲ ಎಂದರು.

LEAVE A REPLY

Please enter your comment!
Please enter your name here