ಸುಳ್ಯ: ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಮಂಗಳೂರು(ಸುಳ್ಯ): ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣವನ್ನು ಮರು ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾ ನಡೆಸಿ ಪ್ರತಿಭಟನೆ ಮಾಡಲಾಯಿತು. ಸೌಜನ್ಯ ಪ್ರಕರಣವನ್ನು ಮರುತನಿಖೆ ನಡೆಸುವಂತೆ ಪ್ರತಿಭಟನಾಕಾರರು ಸರಕಾರವನ್ನು ಆಗ್ರಹಿಸಿದರು.

ನಿಂತಿಕಲ್ಲಿನಿಂದ ಸುಳ್ಯದವರೆಗೆ ಸುಮಾರು 22 ಕಿ.ಮೀವರೆಗೆ ಕಾಲ್ನಡಿಗೆಯಲ್ಲಿ ಸಾಗಿ ಸುಳ್ಯದಲ್ಲಿ ಬೃಹತ್ ಸಭೆ ನಡೆಯಿತು. ಸೌಜನ್ಯ ತಾಯಿ ಕುಸುಮಾವತಿ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿಯಾಗಿದ್ದರು. ಪಕ್ಷ, ಜಾತಿ, ಧರ್ಮ ಮರೆತು ನ್ಯಾಯಕ್ಕಾಗಿ ನಡೆದ ಈ ಜಾಥಾಕ್ಕೆ ಸುಳ್ಯದ ಗೌಡರ ಸಂಘ ಸೇರಿ, ಹಲವಾರು ಸಂಘ ಸಂಸ್ಥೆಗಳು ಬೆಂಬಲ ನೀಡಿದೆ.

LEAVE A REPLY

Please enter your comment!
Please enter your name here