ಮಂಗಳೂರು: ಕಾಲುಬಾಯಿ ರೋಗ ಕೇರಳದಲ್ಲಿ ಹೆಚ್ಚಾಗಿದ್ದು, ಜಿಲ್ಲೆಗೆ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ತೆಗೆದು ಕೊಳ್ಳುವ ಅಗತ್ಯವಿರುವುದರಿಂದ ಕೇರಳ ದಲ್ಲಿ ರೋಗ ಹತೋಟಿಗೆ ಬರುವವರೆಗೆ ಕೇರಳ ರಾಜ್ಯದಿಂದ ಜಿಲ್ಲೆಗೆ ಬರುವ ಹಾಗೂ ಜಿಲ್ಲೆಯಿಂದ ಕೇರಳಕ್ಕೆ ಜಾನುವಾರು ಸಾಗಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಕೇರಳ ರಾಜ್ಯದಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ಹೆಚ್ಚಾಗಿ ಕಂಡು ಬಂದಿದ್ದು, ಅದು ವೈರಸ್‌ನಿಂದ ಬಹುಬೇಗ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತದೆ. ಈ ರೋಗ ಜಾನುವಾರುಗಳಿಗೆ ಮಾರಣಾಂತಿಕವಾಗಿರುವುದರಿಂದ ಕೇರಳ ರಾಜ್ಯಕ್ಕೆ ಜಾನುವಾರು ಸಾಗಾಟ ಮಾಡು ವುದನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.