ದೀಪಕ್ ರಾವ್ ಕೊಲೆ ಸೇರಿ ಹಲವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ನೌಷದ್ ಕೇರಳದಲ್ಲಿ ಸಿಸಿಬಿ ಪೋಲಿಸರ ಬಲೆಗೆ

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

ಮೊಹಮ್ಮದ್ ನೌಷದ್ ಅಲಿಯಾಸ್ ಉಲ್ಲಂಜೆ ನೌಷದ್(28) ಎಂಬಾತ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಕೇರಳದ ಕಾಸರಗೋಡು ಜಿಲ್ಲೆಯ ಮೀಯಪದವು ಬಳಿಯಿಂದ ಸಿಸಿಬಿ ಪೋಲಿಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

LEAVE A REPLY

Please enter your comment!
Please enter your name here