ಆ.16ರ ವರೆಗೆ ಕರಾವಳಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ಮಳೆ-ಹವಾಮಾನ ಇಲಾಖೆ

ಮಂಗಳೂರು(ಬೆಂಗಳೂರು): ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಆಗಸ್ಟ್ 16ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here