ಮಂಗಳೂರು(ಚೆನ್ನೈ): ಶಾಲಾ ಬಾಲಕಿ ಮೇಲೆ ಹಸುವೊಂದು ಭಯಾನಕವಾಗಿ ದಾಳಿ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಗಾಯಗೊಂಡ ಬಾಲಕಿಯನ್ನು ಆಯಿಷಾ(9) ಎಂದು ಗುರುತಿಸಲಾಗಿದೆ. ಸದ್ಯ ಈಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ. ಹಸು ದಾಳಿ ಮಾಡುವ ದೃಶ್ಯವು ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಸದ್ಯ ಹಸುಗಳ ಮಾಲೀಕನನ್ನು ಪೊಲೀಸರು ಬಂಧಿಸಿ, ಕೇಸ್ ದಾಖಲಿಸಿದ್ದಾರೆ. ನಿರ್ಲಕ್ಷ್ಯ ಮತ್ತು ಸಾರ್ವಜನಿಕ ಜೀವಕ್ಕೆ ಅಪಾಯದ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅರುಂಬಕ್ಕಂ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಚೆನ್ನೈ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ಹಸುಗಳ ಮಾಲೀಕರಿಗೆ 2,000 ದಂಡ ವಿಧಿಸಿದ್ದಾರೆ.
ವೀಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
तमिलनाडु : चेन्नई में गाय ने बच्ची को हवा में उछाला, बार-बार पटककर अधमरा छोड़ा
Tamil Nadu | #TamilNadu | Cow attack a girl in Chennai | #Chennai pic.twitter.com/S4Bm9JRjOb
— chomu_akshay✌️ (@Blackwatchpolo) August 11, 2023