ಬಿಬಿಎಂಪಿ ಅಕ್ರಮಗಳ ತನಿಖೆಗೆ ಸಿಎಂ ಆದೇಶದ ಬೆನ್ನಲ್ಲೇ ಪಾಲಿಕೆ ಕಚೇರಿಗೆ ಬೆಂಕಿ

ಮಂಗಳೂರು(ಬೆಂಗಳೂರು): ಬೆಂಗಳೂರು ನಗರ ಪಾಲಿಕೆಯ ಗುಣಮಟ್ಟ ನಿಯಂತ್ರಣ ವಿಭಾಗದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡು 9 ಮಂದಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ ಮತ್ತು ಈ ಕುರಿತು ಎಫ್‌ಐಆರ್ ದಾಖಲಿಸಲಾಗಿದೆ. ಈ ಘಟನೆ ಸಂಜೆ 5ರಿಂದ 5.30ರ ನಡುವೆ ನಡೆದಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನು ಕಛೇರಿಯಲ್ಲಿದ್ದೆ, ಕರೆಂಟ್‌ ಹೋಗಿತ್ತು, ನಂತರ ನಮ್ಮ ಕಚೇರಿಯ ಹಿಂಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ನನಗೆ ತಿಳಿಯಿತು. ಅಲ್ಲಿಗೆ ಹೋದಾಗ, ಕಟ್ಟಡದಲ್ಲಿ ಭಾರಿ ಬೆಂಕಿ ಹೊತ್ತಿಕೊಂಡಿರುವುದನ್ನು ನೋಡಿದೆ. ಘಟನೆಯಿಂದ ಅಪಾರ ನಷ್ಟ ಸಂಭವಿಸಿದೆ. ಅಲ್ಲಿ ಕೆಲಸ ಮಾಡುವವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಗಾಯಾಳುಗಳನ್ನು ಸಮೀಪದ ಸೈಂಟ್ ಮಾರ್ಥಾಸ್ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗಕ್ಕೆ ದಾಖಲಿಸಲಾಗಿದೆ. ಮುಖ್ಯ ಎಂಜಿನಿಯರ್ ಸೇರಿದಂತೆ ಒಂಬತ್ತು ಎಂಜಿನಿಯರ್‌ಗಳಿಗೆ ಗಾಯಗಳಾಗಿವೆ ಎಂದು ಹೇಳಿದ ತುಷಾರ್‌ ಗಿರಿನಾಥ್, ಅವರ ಆರೋಗ್ಯದ ಸ್ಥಿತಿಯ ಬಗ್ಗೆ ಹೇಳಲು ನಿರಾಕರಿಸಿದರು. ವಸ್ತುಗಳಿಗೆ ಹಾನಿಯಾಗಿರುವ ಕುರಿತು ಕೇಳಿದ ಪ್ರಶ್ನೆಗೆ, ಬಿಬಿಎಂಪಿ ಮುಖ್ಯಸ್ಥರು ಅದನ್ನು ನಂತರ ತಿಳಿಯಬಹುದು, ಸದ್ಯ ಅಲ್ಲಿ ಸುಟ್ಟು ಕರಕಲಾದ ವಿಷಯದ ಬಗ್ಗೆ ಗಮನ ಹರಿಸುತ್ತಿಲ್ಲ, ಅದು ನಂತರ ತಿಳಿಯಲಿದೆ ಎಂದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೇ ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನಾಗರಿಕ ಸಂಸ್ಥೆಯಲ್ಲಿನ ಅಕ್ರಮಗಳ ತನಿಖೆಗಾಗಿ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ಸಮಿತಿಗಳನ್ನು ರಚಿಸಿದ್ದಾರೆ. ಇದಾದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ. ಸಿದ್ದರಾಮಯ್ಯ ಅವರು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಯಾಳುಗಳ ಮುಖ ಮತ್ತು ಕೈಗಳಿಗೆ ಗಾಯಗಳಾಗಿವೆ, ಗಾಯಾಳುಗಳಿಗೆ ಶೇಕಡಾ 30ರಷ್ಟು ಸುಟ್ಟ ಗಾಯಗಳಾಗಿವೆ ಎಂದು ವೈದ್ಯರು ಹೇಳಿದ್ದು, ಅವರು ಚೇತರಿಸಿಕೊಳ್ಳುತ್ತಾರೆ ಎಂಬ ಭರವಸೆಯಿದೆ ಎಂದು ಹೇಳಿದರು. ಘಟನೆ ಹೇಗೆ ಮತ್ತು ಏಕೆ ಸಂಭವಿಸಿತು ಎಂಬುದರ ಕುರಿತು ತನಿಖೆ ನಡೆಸುವಂತೆ ತುಷಾರ್‌ ಗಿರಿನಾಥ್ ಅವರಿಗೆ ಮುಖ್ಯಮಂತ್ರಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here