ಹಿಮಾಚಲದಲ್ಲಿ ಮುಂದುವರಿದ ಮಳೆ – ಉಕ್ಕಿ ಹರಿದ ಬಿಯಾಸ್‌ ನದಿ

ಮಂಗಳೂರು(ನವದೆಹಲಿ): ಉತ್ತರ ಭಾರತ ಸೇರಿದಂತೆ ಹಿಮಾಚಲ ಪ್ರದೇಶದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ಕುಲ್ಲುವಿನಲ್ಲಿ ಬಿಯಾಸ್ ನದಿ ಉಕ್ಕಿ ಹರಿಯುತ್ತಿದೆ. ಭಾರಿ ಮಳೆಯಿಂದಾಗಿ ನದಿಗಳು, ಕೆರೆಕಟ್ಟೆಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿರುವ  ವಿಡಿಯೋವನ್ನು ‘ಎಎನ್‌ಐ’ ಎಕ್ಸ್ ನಲ್ಲಿ ಹಂಚಿಕೊಂಡಿದೆ. ಪ್ರವಾಹದಿಂದ ಮಳೆ ನೀರು ರಭಸವಾಗಿ ಹರಿಯುತ್ತಿರುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ.

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಗುಟ್ಕರ್‌, ಪಾಂಡೋಹ್ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ ಜುಲೈನಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 60ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರು. ದಿಢೀರ್‌ ಪ್ರವಾಹ ಮತ್ತು ಭೂಕುಸಿತದ ಪರಿಣಾಮ 5 ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್‌ ಮಾಡಲಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here