



ಮಂಗಳೂರು(ಬೆಂಗಳೂರು): ಬರ ಘೋಷಣೆ ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಪತ್ರ ಬರೆದಿದ್ದಾರೆ.







ಕಳೆದ ಕೆಲವು ವರ್ಷಗಳಿಂದ ಹಲವು ಸವಾಲುಗಳು ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಜನರ ಜೀವನದ ಮೇಲೆ ಭಾರಿ ಪರಿಣಾಮ ಬೀರುತ್ತಿದ್ದು, ವಿಶೇಷವಾಗಿ ಕರ್ನಾಟಕದಲ್ಲಿ ಜೀವನೋಪಾಯದ ಪ್ರಮುಖ ಮೂಲವಾಗಿರುವ ಕೃಷಿ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ. ಮಳೆ ಕೊರತೆಯಿಂದ ಬೆಳೆ ನಷ್ಟ, ಕುಡಿಯುವ ನೀರಿನ ಕೊರತೆ, ಬರಗಾಲ, ಗ್ರಾಮೀಣ ಸಮುದಾಯಗಳಿಗೆ ಸಾಮಾಜಿಕ–ಆರ್ಥಿಕ ಸಂಕಷ್ಟಗಳು ಸೇರಿದಂತೆ ತೀವ್ರ ಪರಿಣಾಮಗಳನ್ನು ಉಂಟುಮಾಡಿದೆ ಎಂದು ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.















